Emblem

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 04-12-2018 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ದನಕನದೊಡ್ಡಿ ಗ್ರಾಮದ ಬನ್ನಿ ಮಹಾಂಕಾಳಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 09 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ರಂಗಯ್ಯ ಪಿ.ಎಸ್.ಐ ಮುನಿರಾಬಾದ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 10,660/- ರೂ ಗಳನ್ನು ವಶಪಡಿಸಿಕೊಂಡು 09 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ  ದಾಳಿ

ದಿನಾಂಕ 04-12-2018 ರಂದು ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ವಿಜಯನಗರ ಪ್ರೌಢಶಾಲೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ವೀರಭದ್ರಪ್ಪ ತಂದೆ ಮಲ್ಲಪ್ಪ ಸಾ: ಇಂದ್ರಕೀಲ ನಗರ ಕೊಪ್ಪಳ ಈತನು ಸಾರ್ವಜನಿಕ ಸ್ಥಳದಲ್ಲಿ ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಶಿವರಾಜ ಇಂಗಳೆ ಪಿ.ಎಸ್.ಐ ಡಿ.ಸಿ.ಐ.ಬಿ. ಘಟಕ ಡಿ.ಪಿ.ಓ ಕೊಪ್ಪಳ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತನಿಂದ ರೂ. 6,900/- ರೂ ಗಳನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ  

ದಿನಾಂಕ 04-12-2018 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಿಗನೂರ ಗ್ರಾಮದ ತುಂಗಭದ್ರಾ ಹೊಳೆಯಿಂದ ಆರೋಪಿ ಯಾವುದೇ ಪರವಾನಿಗೆ ಪಡೆದುಕೊಳ್ಳದೆ ಅನಧಿಕೃತವಾಗಿ ಕಳ್ಳತನದಿಂದ ಮರಳು ಟಿಪ್ಪರನಲ್ಲಿ ಸಾಗಾಟ ಮಾಡುವಾಗ ಶ್ರೀ ಮೋನಯ್ಯ ಎ.ಎಸ್.ಐ ಕಾರಟಗಿ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿ ಟಿಪ್ಪರ ಬಿಟ್ಟು ಓಡಿ ಹೋಗಿದ್ದು, ಟಿಪ್ಪರ ವಶಕ್ಕೆ ತೆಗೆದುಕೊಂಡು ಚಾಲಕ ಮತ್ತು ಮಾಲೀಕನ ವಿರುದ್ದ  ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

065971