Emblem

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 03-02-2019 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಮನ್ನಾಪೂರ ಗ್ರಾಮದ ಅಗಸಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 07 ಆರೋಪಿತರು ಅಕ್ರಮವಾಗಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವಿಶ್ವನಾಥ ಹಿರೇಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ ಆರೋಪಿತರಿಂದ ರೂ. 820/- ಜಪ್ತಿ ಪಡಿಸಿಕೊಂಡು 07 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 03-02-2019 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಮ್ಮ ಸರ್ಕಲ್ ಹತ್ತಿರ ಆರೋಪಿತನಾದ ಬೆಟ್ಟದಪ್ಪ ತಂದೆ ಭೀಮಪ್ಪ ದಂಡಿನ ಸಾ: ಕನಕಗಿರಿ ಈತನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ಶರಣಪ್ಪ ಎ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿ ಸಮೇತ ದಾಳಿ ಮಾಡಿ ರೂ. 1,582/- ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ.

ದಿನಾಂಕ 03-02-2019 ರಂದು ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಮುದೇನೂರ ಗ್ರಾಮ ಸೀಮಾದಲ್ಲಿ ಆರೋಪಿತನು ಟ್ರ್ಯಾಕ್ಟರ್ ನಂ. ಕೆ.ಎ-29 ಟಿಬಿ-1216 ನೇದ್ದರಲ್ಲಿ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ಲೋಡ ಮಾಡಿಕೊಂಡು ಹೋಗುತ್ತಿದ್ದಾಗ ಶ್ರೀ ಮಹಾಂತೇಶ ಸಜ್ಜನ್ ಪಿ.ಎಸ್.ಐ. ತಾವರಗೇರಾ ಪೊಲೀಸ್ ಠಾಣೆರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಟ್ರ್ಯಾಕ್ಟರ್ ವಶಕ್ಕೆ ತೆಗೆದುಕೊಂಡು ಸದರಿ ಚಾಲಕ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 03-02-2019 ರಂದು ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಾಳ ರಸ್ತೆಯ ಪ್ರಗತಿ ನಗರ ಕ್ರಾಸ್ ದಲ್ಲಿ ಆರೋಪಿತರಾದ 1] ಮಂಜುನಾಥ ತಂದೆ ಬಸನಗೌಡ ಈಶ್ವರಗೌಡ ಸಾ: ಓಜನಹಳ್ಳಿ 2] ನಾಗರಾಜ ಈಶ್ವರಗೌಡ ಇವರು ಟ್ರ್ಯಾಕ್ಟರ್ ಗಳಲ್ಲಿ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ಲೋಡ ಮಾಡಿಕೊಂಡು ಹೋಗುತ್ತಿದ್ದಾಗ ಶ್ರೀ ಶಿವಾನಂದ ವಾಲೀಕಾರ ಪಿ.ಐ. ಕೊಪ್ಪಳ ನಗರ ಪೊಲೀಸ್ ಠಾಣೆರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಟ್ರ್ಯಾಕ್ಟರ್ ವಶಕ್ಕೆ ತೆಗೆದುಕೊಂಡು ಸದರಿ ಚಾಲಕ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

084836