ಇಸ್ಪೇಟ್ ಜೂಜಾಟ ದಾಳಿ
ದಿನಾಂಕ 09-02-2019 ರಂದು ಹನುಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಡಿಕೇರಿ ಗ್ರಾಮದಲ್ಲಿ ಸರಕಾರಿ ಹಳ್ಳದ ಜಾಲಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ 04 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ನಾಗರಾಜ ಪಿ.ಎಸ್.ಐ. ಹನುಮಸಾಗರ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 4,300/- ರೂ ಗಳನ್ನು ವಶಪಡಿಸಿಕೊಂಡು 04 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.