Emblem

ಕ್ರಿಕೇಟ್  ಜೂಜಾಟ ದಾಳಿ

ದಿನಾಂಕ 27-04-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣದ ಪನ್ನಾಪುರ ಕ್ರಾಸ ಹತ್ತಿರ ಶಶಿ ಕಂಪ್ಯೂಟರ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಐ.ಪಿ.ಎಲ್. ಪಂದ್ಯಾವಳಿಗಳ ಮೇಲೆ ಕ್ರಿಕೇಟ್ ಬೆಟ್ಟಿಂಗ್ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿಯು ಶ್ರೀ ಶರತಕುಮಾರ ಪಿ.ಎಸ್.ಐ. ಕಾರಟಗಿ ಠಾಣೆ ರವರಿಗೆ ಬಂದ ಮೇರೆಗೆ ಕೂಡಲೇ ಅವರು ಸಿಬ್ಬಂದಿ ರವರಿಗೆ ಕರೆದುಕೊಂಡು ಹೋಗಿ ದಾಳಿ ಮಾಡಿ ಕ್ರಿಕೇಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಆರೋಪಿ ಯಮನೂರ ತಂದೆ ಕೇಮರಾಜ ಮೇಲೆ ದಾಳಿ ಮಾಡಲು ಒಬ್ಬ ಆರೋಪಿ ಸಿಕ್ಕಿಬಿದ್ದಿದ್ದು ಸದರಿಯವನಿಂದ 10,500/- ರೂ ಮತ್ತು 1 ಮೋವೈಲ್ ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 27-04-2019 ರಂದು ಗಂಗಾವತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ರಿಲಯನ್ಸ್ ಪೆಟ್ರೋಲ್ ಬಂಕ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಐ.ಪಿ.ಎಲ್. ಪಂದ್ಯಾವಳಿಗಳ ಮೇಲೆ ಕ್ರಿಕೇಟ್ ಬೆಟ್ಟಿಂಗ್ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿಯು ಶ್ರೀ ಉದಯ ರವಿ ಪಿ.ಐ. ಗಂಗಾವತಿ ನಗರ ಠಾಣೆ ರವರಿಗೆ ಬಂದ ಮೇರೆಗೆ ಕೂಡಲೇ ಅವರು ಸಿಬ್ಬಂದಿ ರವರಿಗೆ ಕರೆದುಕೊಂಡು ಹೋಗಿ ದಾಳಿ ಮಾಡಿ ಕ್ರಿಕೇಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 04 ಜನ ಆರೋಪಿತರ ಮೇಲೆ ದಾಳಿ ಮಾಡಲು ಒಬ್ಬ ಆರೋಪಿ ಸಿಕ್ಕಿಬಿದ್ದಿದ್ದು ಸದರಿಯವನಿಂದ 2,500/- ರೂ ಮತ್ತು 1 ಮೋವೈಲ್ ಜಪ್ತಿ ಪಡಿಸಿಕೊಂಡು 04 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 27-04-2019 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಕಲತಾವರಗೇರಿ ಗ್ರಾಮದ ದನಕನದೊಡ್ಡಿ ವಾನ್ಯಾರ ಬಂಡಿ ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 08 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ರಂಗಯ್ಯ ಪಿ.ಎಸ್.ಐ. ಮುನಿರಾಬಾದ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 4,900/- ರೂ ವಶಪಡಿಸಿಕೊಂಡು 08 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 27-04-2019 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಆರೋಪಿತನಾದ ಹನುಮಂತಪ್ಪ ತಂದೆ ಪ್ಯಾಟಪ್ಪ ತೋಟದ ಸಾ: ಹಿರೇಮನ್ನಾಪುರ ಈತನು ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,784/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

110302