playing cards

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 30-04-2019 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ವಜ್ರಬಂಡಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಹಿಂದಿನ ಸಾರ್ವಜನಿಕ ಸ್ಥಳದಲ್ಲಿ 08 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಬಸವರಾಜ ಅಡವಿಬಾವಿ ಪಿ.ಎಸ್.ಐ. ಯಲಬುರ್ಗಾ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 4,820/- ರೂ ವಶಪಡಿಸಿಕೊಂಡು 08 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಕ್ರಿಕೇಟ್ ಜೂಜಾಟ ದಾಳಿ

ದಿನಾಂಕ 30-04-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಜಂಗಮರ ಕಲ್ಗುಡಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಇರುವ ಬೆಟ್ಟದೀಶ್ವರ ಪಾನ್ ಶಾಪ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಬೀದಿಯ ಲೈಟಿನ ಬೆಳಕಿನಲ್ಲಿ ಐ.ಪಿ.ಎಲ್. ಪಂದ್ಯಾವಳಿಗಳ ಮೇಲೆ ಕ್ರಿಕೇಟ್ ಬೆಟ್ಟಿಂಗ್ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿಯು ಶ್ರೀ ವಿನಾಯಕ ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರಿಗೆ ಬಂದ ಮೇರೆಗೆ ಕೂಡಲೇ ಅವರು ಸಿಬ್ಬಂದಿ ರವರಿಗೆ ಕರೆದುಕೊಂಡು ಹೋಗಿ ದಾಳಿ ಮಾಡಿ ಕ್ರಿಕೇಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಆರೋಪಿತರಾದ ಧನಂಜಯ ತಂದೆ ಈರಪ್ಪ ಮತ್ತು ಮಕ್ತುಮಸಾಬ ತಂದೆ ಖಾಸಿಂಸಾಬ ಇವರ ಮೇಲೆ ದಾಳಿ ಮಾಡಿ ಸದರಿಯವರಿಂದ 6,350/- ರೂ ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಮಟಕಾ ದಾಳಿ

ದಿನಾಂಕ 30-04-2019 ರಂದು  ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಹೈದರ ಗ್ರಾಮದ ಬ್ಯಾಂಕ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಹನುಮೇಶ ತಂದೆ ಕನಕಪ್ಪ ಸಾ: ಹುಲಿಹೈದರ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವೀರಾರೆಡ್ಡಿ ಪಿ.ಎಸ್.ಐ. ಕನಕಗಿರಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 2,325=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 30-04-2019 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ನಿಂಗಾಪುರ ಗ್ರಾಮದ ಅಂಡರಪಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಪಾಂಡು ತಂದೆ ಜಿ. ಕಣ್ಣನ ಸಾ: ಹೊಸನಿಂಗಾಪುರ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಕೆ. ರಂಕಯ್ಯ ಪಿ.ಎಸ್.ಐ. ಮುನಿರಾಬಾದ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1,150=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

110292