joomla vector social icons
 

Emblem

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 11-06-2018 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ತೊಂಡಿಹಾಳ ಗ್ರಾಮದ ದುರುಗಮ್ಮದೇವಿಯ ಗುಡಿಯ ಹತ್ತಿರ ಆರೋಪಿತನಾದ ಶಿವರಾಜ ತಂದೆ ದೇವಪ್ಪ ಗೌಡ್ರ  ಸಾ: ತೊಂಡಿಹಾಳ ಇತನು ತನ್ನ ಪಾನ್ ಶಾಪ್ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ತನ್ನ ಹತ್ತಿರ ಯಾವುದೇ ಲೈಸನ್ಸ್ ಇಲ್ಲದೇ ಸಾರ್ವಜನಿಕರಿಗೆ ಮದ್ಯ ಸೇವಿಸಲು ಅವಕಾಶ ಮಾಡಿಕೊಟ್ಟಿದ್ದಾಗ್ಗೆ ಶ್ರೀ ಎಂ ಶಿವಕುಮಾರ ಪಿ.ಎಸ್.ಐ ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ರೂ, 442=95 ಗಳು ಮೌಲ್ಯದ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 11-06-2018 ರಂದು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ನವಲಹಳ್ಳಿ ಗ್ರಾಮದದಲ್ಲಿ ಆರೋಪಿತನಾದ ದೇವಪ್ಪ ತಂದೆ ಕನಕಪ್ಪ ನಾಯಕ್ ಸಾ: ನವಲಹಳ್ಳಿ ಇತನು ತನ್ನ ಮನೆಯಲ್ಲಿ ಅಕ್ರಮವಾಗಿ ಮದ್ಯವನ್ನು ಸಂಗ್ರಹಿಸಿಟ್ಟಿದ್ದು ಶ್ರೀ ಶಿವರಾಜ ಪಿ.ಎಸ್.ಐ. ತಾವರಗೇರಾ ಠಾಣೆ  ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ, 1269=00 ಗಳು ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

025333

Main Menu