joomla vector social icons
 

Emblem

ಇಸ್ಪೇಟ ಜೂಜಾಟ ದಾಳಿ

ದಿನಾಂಕ 13-06-2018 ರಂದು ಹನುಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣದ ಹಿಂದೆ ಸಾರ್ವಜನಿಕ ಸ್ಥಳದಲ್ಲಿ 05 ಜನ  ಆರೋಪಿತರು ಅಕ್ರಮವಾಗಿ ಇಸ್ಪೇಟ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಕಾಸೀಂಸಾಬ ಎ.ಎಸ್.ಐ. ಹನುಮಸಾಗರ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ ಆರೋಪಿತರಿಂದ ರೂ 720/-  ಜಪ್ತಿ ಪಡಿಸಿಕೊಂಡು 05 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 13-06-2018 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹಟ್ಟಿ ಗ್ರಾಮದಲ್ಲಿ ಆರೋಪಿತನಾದ ಮೈಲಾರಗೌಡ ತಂದೆ ಭೀಮನಗೌಡ  ಸಾ: ಹಟ್ಟಿ ಇತನು ತನ್ನ ಮನೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಲೈಸನ್ಸ್ ಇಲ್ಲದೇ ಸಾರ್ವಜನಿಕರೊಂದಿಗೆ  ಮದ್ಯ ಸೇವನೆ ಮಾಡುತ್ತಿದ್ದಾಗ ಶ್ರೀ ಮೋಹನ ಕುಮಾರ ಪಿ.ಎಸ್.ಐ ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ರೂ, 289/- ಮೌಲ್ಯದ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ

ದಿನಾಂಕ 13-06-2018 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ  ಹಗೇದಾಳ ಹಳ್ಳದಿಂದ ಆರೋಪಿತರಾದ 1. ನಾಗಪ್ಪ ತಂದೆ ಮಲ್ಲಪ್ಪ ಸಾ: ಕಾರಟಗಿ ಮತ್ತು 2. ದುರ್ಗಪ್ಪ ತಂದೆ ಪಾಮಣ್ಣ ಟ್ರ್ಯಾಕ್ಟರ ಮಾಲಿಕ ಇವರು ಹಗೇದಾಳ ಹಳ್ಳದಿಂದ ಯಾವುದೇ ಪರವಾನಿಗೆ ಇಲ್ಲದೆ ಆಕ್ರಮವಾಗಿ ಮರುಳನ್ನು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದಾಗ ಶ್ರೀ. ಶಿವಕುಮಾರ ಪಿ.ಎಸ್.ಐ ಕಾರಟಗಿ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಟ್ರ್ಯಾಕ್ಟರ್ ವಶಕ್ಕೆ ಪಡೆದುಕೊಂಡು 02 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

013837

Main Menu