joomla vector social icons
 

Emblem

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 10-07-2018 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ವಜ್ರಬಂಡಿ ಗ್ರಾಮದ ವಾಲ್ಮೀಕಿ ಸರ್ಕಲ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಮಲ್ಲಪ್ಪ ತಂದೆ ಶರಣಪ್ಪ ಸಾ: ವಜ್ರಬಂಡಿ ಈತನು ತನ್ನ ಹೋಟೇಲಗೆ ಬರುವ ಸಾರ್ವಜನಿಕರಿಗೆ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮದ್ಯ ಕುಡಿಯಲು ಸಹಾಯ ಮಾಡುತ್ತಿದ್ದಾಗ ಶ್ರೀ ವಿನಾಯಕ ಪಿ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಆಕ್ರಮ ಪಡಿತರ ಅಕ್ಕಿ ಸಾಗಾಣೆ ದಾಳಿ

ದಿನಾಂಕ 10-07-2018 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ  ಹಿರೇಸಿಂಧೋಗಿ ರಸ್ತೆಯ ಹತ್ತಿರ ಆರೋಪಿತನಾದ ಅಂಜಿನಪ್ಪ ತಂದೆ ಹನುಮಪ್ಪ ಬಾರಕೇರ ಸಾ: ಬಿಸರಳ್ಳಿ ಈತನು ಆಕ್ರಮವಾಗಿ ಪಡಿತರ ಅಕ್ಕಿ 40 ಕೆ.ಜಿ.ಯ 20 ಮೂಟೆಗಳು ಅ.ಕಿ. 12,000/- ಟಾಟಾ ಏಸ್ ವಾಹನದಲ್ಲಿ ಸಾಗಾಣೆ ಮಾಡುವಾಗ ಶ್ರೀ ಚನ್ನಬಸ್ಪ್ಪ ಹಟ್ಟಿ ಆಹಾರ ನೀರಿಕ್ಷಕರು ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ರವರು ದಾಳಿ ಮಾಡಿ ಹಿಡಿದು ಚಾಲಕ ಮತ್ತು ಮಾಲೀಕನ ವಿರುದ್ದ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

043956

Main Menu