joomla vector social icons
 

Capture All

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 10-07-2018 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ಕಕ್ಕಿಹಳ್ಳಿ ತಾಂಡಾದ ವೆಂಕಟೇಶ್ವರ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಅಕ್ರಮವಾಗಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ರಾಘವೇಂದ್ರ ಪಿ.ಎಸ್.ಐ ಕುಕನೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, 06 ಜನ ಆರೋಪಿತರು ಸಿಕ್ಕಿಬಿದ್ದಿದ್ದು ಆರೋಪಿತರಿಂದ ರೂ. 8,400/- ಜಪ್ತಿ ಪಡಿಸಿಕೊಂಡು 06 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 10-07-2018 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಕೂರ ಗ್ರಾಮದ ಅಪ್ಪಯ್ಯನ ದೇವಸ್ಥಾನದ ಮುಂದೆ ಸಾರ್ವಜನಿಕ ಸ್ಥಳದಲ್ಲಿ 10 ಜನ ಆರೋಪಿತರು ಅಕ್ರಮವಾಗಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ವಿಶ್ವನಾಥ ಹಿರೇಗೌಡರ ಪಿ.ಎಸ್.ಐ ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, 10 ಜನ ಆರೋಪಿತರು ಸಿಕ್ಕಿಬಿದ್ದಿದ್ದು ಆರೋಪಿತರಿಂದ ರೂ. 10,300/- ಜಪ್ತಿ ಪಡಿಸಿಕೊಂಡು 06 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಮಟಕಾ  ದಾಳಿ

ದಿನಾಂಕ 10-07-2018 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕನೂರ ಕ್ರಾಸನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಶಂಭುಲಿಂಗಪ್ಪ ತಂದೆ ಬಸಪ್ಪ ಬಳ್ಳಾರಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವಿನಾಯಕ ಪಿ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 720=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 10-07-2018 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ದೊಟೀಹಾಳ ಗ್ರಾಮದ ಹಳೆಯ ಮಠದ  ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಹನುಮಂತಪ್ಪ ತಂದೆ ಮುದಕಪ್ಪ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವಿಶ್ವನಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1,160=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 10-07-2018 ರಂದು ಕಾರಟಗಿ  ಪೊಲೀಸ್ ಠಾಣೆ ವ್ಯಾಪ್ತಿಯ ಮರ್ಲಾನಹಳ್ಳೀಯ ಯರಡೋಣ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ ಯಪನಪ್ಪ ತಂದೆ ಅಯ್ಯಪ್ಪ ನಾಯಕ ಮತ್ತು ನೆಕ್ಕಂಟಿ ನಾಗರಾಜ ಮಲ್ಲಿಗೆ ಬಾರ್ ಮಾಲಿಕ ಕಾರಟಗಿ ಇವರು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ರಾಜಕುಮಾರ ವಾಜಂತ್ರಿ ಪಿ.ಐ. ಡಿ.ಸಿ.ಐ.ಬಿ. ಘಟಕ ಡಿ.ಪಿ.ಓ. ಕೊಪ್ಪಳ ರವರು ಸಿಬ್ಬಂದಿ ಸಮೇತ ದಾಳಿ ರೂ 9,083/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 10-07-2018 ರಂದು ಕಾರಟಗಿ  ಪೊಲೀಸ್ ಠಾಣೆ ವ್ಯಾಪ್ತಿಯ ಮರ್ಲಾನಹಳ್ಳೀಯ ಯರಡೋಣ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ ದೇವರಾಜ ತಂದೆ ಶಂಕ್ರಪ್ಪ ಯರಗೇರಿ ಮತ್ತು ರುದ್ರಗೌಡ ಪ್ರಥಬ ಬಾರ್ ಮಾಲಿಕ ಸಿದ್ದಾಪುರ ಇವರು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ರಾಜಕುಮಾರ ವಾಜಂತ್ರಿ ಪಿ.ಐ. ಡಿ.ಸಿ.ಐ.ಬಿ. ಘಟಕ ಡಿ.ಪಿ.ಓ. ಕೊಪ್ಪಳ ರವರು ಸಿಬ್ಬಂದಿ ಸಮೇತ ದಾಳಿ ರೂ 17,936/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 10-07-2018 ರಂದು ಕಾರಟಗಿ  ಪೊಲೀಸ್ ಠಾಣೆ ವ್ಯಾಪ್ತಿಯ ಗೂಡೂರ ಗ್ರಾಮದ ಜನತಾ ಕಾಲೋನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ರಾಮಚಂದ್ರ ತಂದೆ ಪಾಪಣ್ಣ ಈತನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ಎಂ. ಶಿವಕುಮಾರ ಪಿ.ಎಸ್.ಐ. ಕಾರಟಗಿ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ರೂ 1,396/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ

ದಿನಾಂಕ 10-07-2018 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಕೂರ ಹಳ್ಳದಲ್ಲಿ ಒಂದು ಟಿಪ್ಪರನಲ್ಲಿ ಆಕ್ರಮವಾಗಿ ಮರಳನ್ನು ತುಂಬುವಾಗ ಶ್ರೀ ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿದಾಗ ಆರೋಪಿ ಟಿಪ್ಪರ ಬಿಟ್ಟು ಓಡಿ ಹೋಗಿದ್ದು ಚಾಲಕ ಮತ್ತು ಮಾಲೀಕನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

015817

Main Menu