ಇಸ್ಪೇಟ್ ಜೂಜಾಟ ದಾಳಿ
ದಿನಾಂಕ 11-07-2018 ರಂದು ಹನುಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಟರಠಾಣಾ ಸೀಮಾದ ಕರಬಸವ ಎಂಬುವರ ಜಮೀನಿನ ಪಕ್ಕದಲ್ಲಿರುವ ಹಳ್ಳದ ದಂಡೆಯ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ಅಕ್ರಮವಾಗಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ನಾಗರಾಜ ಪಿ.ಎಸ್.ಐ ಹನುಮಸಾಗರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, 05 ಜನ ಆರೋಪಿತರು ಸಿಕ್ಕಿಬಿದ್ದಿದ್ದು ಆರೋಪಿತರಿಂದ ರೂ. 15,030/- ಜಪ್ತಿ ಪಡಿಸಿಕೊಂಡು 05 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.
ದಿನಾಂಕ 11-07-2018 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ತಳಕಲ್ ಗ್ರಾಮದ ಬುತ್ತಿ ಬಸವೇಶ್ವರ ದೇವಸ್ಥಾನದ ಹಿಂದೆ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ಅಕ್ರಮವಾಗಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ರಾಘವೇಂದ್ರ ಪಿ.ಎಸ್.ಐ ಕುಕನೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, 05 ಜನ ಆರೋಪಿತರು ಸಿಕ್ಕಿಬಿದ್ದಿದ್ದು ಆರೋಪಿತರಿಂದ ರೂ. 9,640/- ಜಪ್ತಿ ಪಡಿಸಿಕೊಂಡು 05 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.
ಮಟಕಾ ದಾಳಿ
ದಿನಾಂಕ 11-07-2018 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಬೂದಗುಂಪಿ ಗ್ರಾಮದ ಶರಣ ಬಸವೇಶ್ವರ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ ಗಂಗಾಧರ ತಂದೆ ವಿರುಪಾಕ್ಷಪ್ಪ ಮತ್ತು ವಿರೇಶ ತಂದೆ ಹೇಮಣ್ಣ ಅಂಗಡಿ ಇವರು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವಿನಾಯಕ ಪಿ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತರಿಂದ ನಗದು ಹಣ ರೂ. 1,620=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.
ದಿನಾಂಕ 11-07-2018 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾಣಾಪುರ ಗ್ರಾಮದ ಸಾವಜಿ ಹೋಟೆಲ್ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ ರಾಜಾಸಾಬ ತಂದೆ ಹುಸೇನಸಾಬ ಸಾ: ಸಾಣಾಪುರ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಪ್ರಕಾಶ ಮಾಳೆ ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 310=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.
ಅಕ್ರಮ ಮದ್ಯ ಮಾರಾಟ ದಾಳಿ
ದಿನಾಂಕ 11-07-2018 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿ ಕ್ರಾಸನಲ್ಲಿ ಸಿದ್ದು ಡಾಬಾದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಕಳಕಪ್ಪ ತಂದೆ ಚೆನ್ನಮಲ್ಲಪ್ಪ ಈತನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ವಿನಾಯಕ ಪಿ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ರೂ 1,481/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.
ಅಕ್ರಮ ಮರಳು ಕಳ್ಳ ಸಾಗಾಣಿಕೆ
ದಿನಾಂಕ 11-07-2018 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಾಳ ಗ್ರಾಮದ ಸೀಮಾದಲ್ಲಿ ಆರೋಪಿತನಾದ ಶಿವರಾಜ ರೊಡ್ಡಾ ಈತನು ಆಕ್ರಮವಾಗಿ ಮರಳನ್ನು ಹಿರೇಹಳ್ಳದಿಂದ ಟಿಪ್ಪರನಲ್ಲಿ ಸಾಗಾಟ ಮಾಡುವಾಗ ಶ್ರೀ ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಟಿಪ್ಪರ ಮತ್ತು ಚಾಲಕನನ್ನು ವಶಕ್ಕೆ ಪಡೆದು ಚಾಲಕ ಮತ್ತು ಮಾಲೀಕನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.