joomla vector social icons
 

Capture All

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 02-07-2019 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಕಂಪಸಾಗರ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ 08 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ರಂಗಯ್ಯ ಕೆ ಪಿ.ಎಸ್.ಐ ಮುನಿರಾಬಾದ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 2,730/- ರೂ ವಶಪಡಿಸಿಕೊಂಡು 08 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ದಿನಾಂಕ 02-07-2019 ರಂದು ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಮ್ಯಾದನೇರಿ ಸರಕಾರಿ ಶಾಳೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 10 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಡಿ.ಎಸ್. ಆಂಜನೇಯ ಪಿ.ಎಸ್.ಐ ಬೇವೂರ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 2,180/- ರೂ ವಶಪಡಿಸಿಕೊಂಡು 04 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ

ದಿನಾಂಕ 02-07-2019 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಬೀಡನಾಳ ಗ್ರಾಮದಲ್ಲಿ 01 ಟಿಪ್ಪರ, 01 ಟ್ರ್ಯಾಕ್ಟರ, 01 ಜೆ.ಸಿ.ಬಿ. ಮುಖಾಂತರ ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಕಳ್ಳತನದಿಂದ ಅಕ್ರಮವಾಗಿ ಟ್ರ್ಯಾಕ್ಟರ & ಟಿಪ್ಪರನಲ್ಲಿ ಸಾಗಾಟ ಮಾಡುವಾಗ ಶ್ರೀ ರಮೇಶ ರೊಟ್ಟಿ ಸಿ.ಪಿ.ಐ. ಯಲಬುರ್ಗಾ ವೃತ್ತ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು 01 ಟಿಪ್ಪರ, 01 ಟ್ರ್ಯಾಕ್ಟರ 01, ಜೆ.ಸಿ.ಬಿ, 1 ಮೋಟಾರ ಸೈಕಲ್ ಜಪ್ತಿ ಪಡಿಸಿಕೊಂಡು ಚಾಲಕ ಮತ್ತು ಮಾಲಿಕರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಮಟಕಾ ದಾಳಿ

ದಿನಾಂಕ 02-07-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕುಂಪಿ ಗ್ರಾಮದ ವಾಲ್ಮೀಕಿ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ 1. ಅಂಬರೇಶ ತಂದೆ ದುರ್ಗಪ್ಪ ಲಿಂಗದಳ್ಳಿ 2. ಹನುಮಂತ ತಂದೆ ದುರ್ಗಪ್ಪ ಲಿಂಗದಳ್ಳಿ 3. ಮಂಜುನಾಥ ಸಾ: ಹೇರೂರ ಇವರು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಪ್ರಕಾಶ ಮಾಳಿ ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತರಿಂದ ನಗದು ಹಣ ರೂ. 850=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 02-07-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬೇವನಾಳ ಗ್ರಾಮದ ಬಸರಿಕಟ್ಟಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ವಿರುಪಾಕ್ಷಿ ತಂದೆ ಸಾ: ಮಲ್ಲೇಶಪ್ಪ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಶರತಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1,130=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

124969

Main Menu