joomla vector social icons
 

Emblem

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ  09-07-2019 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ‍ಹ್ಯಾಟಿ ಮುಂಡರಗಿ ಗ್ರಾಮದ ನಂದಬಂಡಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಸುರೇಶ ಡಿ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 2,800/- ರೂ ವಶಪಡಿಸಿಕೊಂಡು 06 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ ದಾಳಿ

ದಿನಾಂಕ 09-07-2019 ರಂದು ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಗುನ್ನಾಳ ಗ್ರಾಮದ ಕೋಳಿಹಾಳ ಗ್ರಾಮದ ಬಸನಿಲ್ದಾಣದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಮಲ್ಲಪ್ಪ ತಂದೆ ಗುಂಡಪ್ಪ ಸಾ: ಗುನ್ನಾಳ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಆಂಜನೇಯ, ಪಿ.ಎಸ್.ಐ, ಬೇವೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 830=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

124985

Main Menu