Emblem

ಮಟಕಾ ಜೂಜಾಟ ದಾಳಿ

ದಿನಾಂಕ 05-04-2019 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗುನ್ನಳ್ಳಿ ಗ್ರಾಮದ ಶ್ರೀ ಗ್ಯಾನೇಶ್ವರ ದೇವಸ್ಥಾನದ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ  ಭೀಮನಗೌಡ ತಂದೆ ವೀರನಗೌಡ ಗೌಡ್ರ ಸಾ: ಗುನ್ನಳ್ಳಿ ಈತನು ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತನಿಂದ ರೂ. 1,570/- ರೂ ಗಳನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಕ್ರಿಕೇಟ್ ಜೂಜಾಟ ದಾಳಿ

ದಿನಾಂಕ 05-04-2019 ರಂದು ಗಂಗಾವತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಕಿಲ್ಲಾ ಏರಿಯಾದ ಅಂಬಾಭವಾನಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಐ.ಪಿ.ಎಲ್. ಪಂದ್ಯಾವಳಿಗಳ ಮೇಲೆ ಕ್ರಿಕೇಟ್ ಬೆಟ್ಟಿಂಗ್ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿಯು ಶ್ರೀ ಉದಯ ರವಿ ಪಿ.ಐ. ಗಂಗಾವತಿ ನಗರ ಠಾಣೆ ರವರಿಗೆ ಬಂದ ಮೇರೆಗೆ ಕೂಡಲೇ ಅವರು ಸಿಬ್ಬಂದಿ ರವರಿಗೆ ಕರೆದುಕೊಂಡು ಹೋಗಿ ದಾಳಿ ಮಾಡಿ ಕ್ರಿಕೇಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 05 ಜನ ಆರೋಪಿತರ ಮೇಲೆ ದಾಳಿ ಮಾಡಲು 02 ಜನರು ಸಿಕ್ಕಿದ್ದು ಸದರಿಯವರಿಂದ 5,000/- ರೂ ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 05-04-2019 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಯಲಬುರ್ಗಾ-ಕುದರಿಕೊಟಗಿ ರಸ್ತೆಯಲ್ಲಿ ಆರೋಪಿತನಾದ ಶರಣಪ್ಪ ತಂದೆ ಗ್ಯಾನಪ್ಪ ರಾಠೋಡ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಬಸವರಾಜ ಪಿ.ಎಸ್.ಐ. ಯಲಬುರ್ಗಾ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1643/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

125667