Emblem

ಮಟಕಾ ದಾಳಿ

ದಿನಾಂಕ 31-07-2019 ರಂದು ಗಂಗಾವತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಎಲ್.ಐ.ಸಿ ಕಛೇರಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಅಸ್ಲಂ ಬೇಗ್ ತಂದೆ ಉಸ್ಮಾನ ಸಾ: ಗಂಗಾವತಿ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಗುರುರಾಜ ಕಟ್ಟಿಮನಿ ಪಿ.ಎಸ್.ಐ, ಡಿ.ಸಿ.ಐ.ಬಿ. ಘಟಕ ಜಿಲ್ಲಾ ಪೊಲೀಸ್ ಕಛೇರಿ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 4,600=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 31-07-2019 ರಂದು ಗಂಗಾವತಿ ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಗಣೇಶ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಹಮೀದ ತಂದೆ ಆಲಂ ಸಾಬ ಸಾ: ಗಂಗಾವತಿ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಉದಯ ರವಿ ಪಿ.ಐ, ಗಂಗಾವತಿ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತರಿಂದ ನಗದು ಹಣ ರೂ. 3,200=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 31-07-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸವಣ್ಣ ಕ್ಯಾಂಪಿನ ಉಣ್ಣಿಬಸವಣ್ಣ ಗುಡಿಯ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ದುರ್ಗಪ್ಪ ತಂದೆ ಛತ್ರಪ್ಪ ಹರಿಜನ ಸಾ: ಬಸವಣ್ಣ ಕ್ಯಾಂಪ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಶರತಕುಮಾರ ಪಿ.ಎಸ್.ಐ, ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 820=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ

ದಿನಾಂಕ 31-07-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ನಂದಿಹಳ್ಳಿ ತುಂಗಾಭದ್ರಾ ನದಿಯ ದಂಡೆಯಿಂದ ಆಕ್ರಮವಾಗಿ ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಟ್ರ್ಯಾಕ್ಟರನಲ್ಲಿ ಸಾಗಾಟ ಮಾಡುವಾಗ ಶ್ರೀ ಶರತಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿತರು ಟ್ರ್ಯಾಕ್ಟರ ಬಿಟ್ಟು ಓಡಿ ಹೋಗಿದ್ದು ಟ್ರ್ಯಾಕ್ಟರ ಜಪ್ತಿ ಪಡಿಸಿಕೊಂಡು ಚಾಲಕ ಮತ್ತು ಮಾಲಿಕರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

199030